ಮೈಸೂರಿನ ಕೆಆರ್ ನಗರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪು ಹೊರಬೀಳುತ್ತಲೇ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ ಘಟನೆ ನಡೆದಿದೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದ್ದು
ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.
ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರು ಹಾಕಿದರು. ಈ ತೀರ್ಪು ಬರ್ತಿದ್ದಂತೆ ಪ್ರಜ್ವಲ್ ರೇವಣ್ಣ ಕೋರ್ಟ್ನಲ್ಲೇ ಪ್ರಜ್ವಲ್ ರೇವಣ್ಣ ಬಿಕ್ಕಿ ಬಿಕ್ಕಿಅತ್ತರು.
ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸ್ ಸಿಬ್ಬಂದಿ ಕೋರ್ಟ್ ಹಾಲ್ ನಿಂದ ಕರೆದೊಯ್ದರು. ಈ ವೇಳೆಯೂ ಜೋರಾಗಿ ಅಳುತ್ತಲೇ ಇದ್ದರು.
ಕಣ್ಣೀರು ಒರೆಸುತ್ತಾ ಪ್ರಜ್ವಲ್ ರೇವಣ್ಣ ಕೋರ್ಟ್ ಹಾಲ್ ನಿಂದ ತೆರಳಿದರು. ಕೋರ್ಟ್ ಹಾಲ್ ಹೊರಗೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅವರನ್ನು ಸಂತೈಸುವ ಕೆಲಸ ಮಾಡಿದರು.
ರಾಜಕೀಯ ಭವಿಷ್ಯ ಅಂತ್ಯ
ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿರುವುದರಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯವೇ ಅಂತ್ಯವಾದಂತಾಗಿದೆ.
ಪ್ರಜ್ವಲ್ಗೆ ಕನಿಷ್ಠ 10 ವರ್ಷಗಳಿಂದ ಗರಿಷ್ಠ ಜೀವಾವದಿ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗ್ತಿದೆ.
ಹೀಗಾಗಿ ಅವರು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಏನಿದು ಪ್ರಕರಣ?
ಸರಣಿ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್ ರೇವಣ್ಣ ಮೇಲಿದ್ದು, ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ.
ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ.
2,900ಕ್ಕೂ ಹೆಚ್ಚು ವಿಡಿಯೋ ವೈರಲ್
2024ರ ಏಪ್ರಿಲ್ ತಿಂಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ವೈರಲ್ ಆಗಿದ್ದವು.
ಹಲವಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಚಿತ್ರಿಸುವ 2,900 ಕ್ಕೂ ಹೆಚ್ಚು ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.