ಪ್ರಜ್ವಲ್ ರೇವಣ್ಣಗೆ ಇಂದು ಮಹತ್ವದ ದಿನ.. ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ತೀರ್ಪು ಆಗಸ್ಟ್ 1 ರಂದು ಅಂದರೆ ಇಂದು ಪ್ರಕಟವಾಗಲಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ತೀರ್ಪು ಪ್ರಕಟ ಮಾಡಲಿದ್ದಾರೆ.
ಇವತ್ತಿನ ವಿಚಾರಣೆಯಲ್ಲಿ ಕೋರ್ಟ್ ಎರಡೂ ಕಡೆ ವಕೀಲರಿಂದ ಕೆಲವು ಸ್ಪಷ್ಟನೆಗಳನ್ನು ಕೇಳಿತು. ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತು.
ಗೂಗಲ್ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಿಸಬಹುದೇ? ಸಾಮ್ಸಂಗ್ ಜೆ4 ಮೊಬೈಲ್ ಸೀಜ್ ಮಾಡಿರುವ ಬಗ್ಗೆಯೂ ವಿವರಣೆ ಕೇಳಿದೆ.
ನಿನ್ನೆ ಆರೋಪಿ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಜ್ವಲ್ ರೇವಣ್ಣ ಕೈ ಮುಗಿದು ನ್ಯಾಯಾಧೀಶರ ಮುಂದೆ ನಿಂತಿದ್ದರು.
ಈ ತೀರ್ಪು ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯ ನಿರ್ಧರಿಸಲಿದೆ
ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯ ನಿರ್ಧರಿಸುವುದರಿಂದ ಈ ತೀರ್ಪು ಭಾರೀ ಮಹತ್ವ ಪಡೆದುಕೊಂಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 4 ಕೇಸ್ಗಳಿವೆ.
ಈ ನಾಲ್ಕು ಕೇಸ್ಗಳ ಪೈಕಿ ಈಗ ಮೊದಲ ಕೇಸ್ ತೀರ್ಪು ಪ್ರಕಟವಾಗುತ್ತಿದೆ. ಈ ಕೇಸ್ನಲ್ಲಿ ಈಗಾಗಲೇ ವಾದ- ಪ್ರತಿವಾದ ಮುಗಿದಿದ್ದು, ಸಾಕ್ಷ್ಯಗಳ ವಿಚಾರಣೆ ಕೂಡ ಮುಗಿದಿದೆ.
ಆಗಸ್ಟ್ 1 ರಂದು ಪ್ರಜ್ವಲ್ ಅಪರಾಧಿಯೋ ಅಥವಾ ಅಲ್ಲವೋ ಎಂದು ಕೋರ್ಟ್ ಮೊದಲಿಗೆ ತೀರ್ಪು ನೀಡಲಿದೆ.
ಒಂದು ವೇಳೆ ಅಪರಾಧಿ ಎಂದು ತೀರ್ಪು ನೀಡಿದರೆ ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುತ್ತೆ. ಶಿಕ್ಷೆಯ ಪ್ರಮಾಣದ ಬಗ್ಗೆ ವಾದ-ಪ್ರತಿವಾದ ನಡೆಯಲಿದೆ.
ಗರಿಷ್ಠ ಶಿಕ್ಷೆಯನ್ನು ವಿಧಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ವಾದ ಮಂಡಿಸಲಿದ್ದಾರೆ. ಕಡಿಮೆ ಶಿಕ್ಷೆ ವಿಧಿಸಬೇಕೆಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಪ್ರತಿವಾದ ಮಂಡಿಸುವ ಸಾಧ್ಯತೆ ಇದೆ.
ಪ್ರಜ್ವಲ್ ರೇವಣ್ಣಗೆ 4 ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ, ಅದಾದ 6 ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧೆ ಮಾಡುವುದಕ್ಕೆ ಬರಲ್ಲ.
ಹೀಗಾಗಿ ಕೋರ್ಟ್ ತೀರ್ಪಿನ ಮೇಲೆ ಪ್ರಜ್ವಲ್ ಅವರ ರಾಜಕೀಯ ಭವಿಷ್ಯ ನಿಂತಿದೆ.