ವಿಜಯಪುರದ ಬಿಎಲ್ಡಿಇ ಸಂಸ್ಥೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ವಿಜಯಪುರ: ಕರ್ನಾಟಕ ಕಾಂಗ್ರೆಸ್ನಲ್ಲಿ ಸದ್ಯ ಅಧಿಕಾರ ಹಂಚಿಕೆಯ ಚರ್ಚೆ ಜೋರಾಗಿ ಕೇಳಿಬರುತ್ತಿದೆ.
2023ರಲ್ಲಿ ಅಧಿಕಾರಕ್ಕೆ ಬಂದಾಗಲೇ ಅಧಿಕಾರ ಹಂಚಿಕೆಯ ಸೂತ್ರ ಸಿದ್ಧವಾಗಿದೆ ಎಂದು ಅನೇಕ ರಾಜಕೀಯ ವಿಶ್ಲೇಷಕರು ಹಾಗೂ ಕಾಂಗ್ರೆಸ್ ಮೂಲಗಳು ಧೃಡಪಡಿಸಿದ್ದರು.
ಆದ್ರೆ, ಇತ್ತೀಚೆಗೆ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ
ಯಾವುದೇ ಅಧಿಕಾರ ಹಂಚಿಕೆಯ ಸೂತ್ರ ಇಲ್ಲ, ನಾನೇ ಪೂರ್ಣಾವಧಿಯ ಸಿಎಂ ಎನ್ನುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.
ಆದ್ರೂ ಇನ್ನೂ ಯಾವುದು ಮುಗಿದ ಅಧ್ಯಾಯವಲ್ಲ ಎಂಬುದು ರಾಜಕೀಯ ವಿಶ್ಲೇಷಕರ ವಾದವಾಗಿದೆ.
ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ನೋವು ತೋಡಿಕೊಂಡ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.. ಏನಂದ್ರು?
ಸದ್ಯ, ವಿಜಯಪುರದ ಬಿಎಲ್ಡಿಇ ಸಂಸ್ಥೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಹೌದು, ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಸಿಎಲ್ಪಿ ಲೀಡರ್ ಆಗಿ ಪಕ್ಷವನ್ನು ಅಧಿಕಾರಿಕ್ಕೆ ತರಲು ಕೆಲಸ ಮಾಡಿದ್ದೇ,
ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸಿದೆ, ಆದ್ರೆ ಸಿಎಂ ಆಗಿದ್ದು ಎಸ್ ಎಂ ಕೃಷ್ಣ ಎಂದು ಬೇಸರು ವ್ಯಕ್ತಪಡಿಸಿದರು.
ಮುಂದುವರೆದು ಮಾತನಾಡಿದ ಅವರು, ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಯ್ತು ಸ್ವಾಮೀಜಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿಎಂ ಸ್ಥಾನ ತಪ್ಪಿದ್ದರ ಬಗ್ಗೆ ಬೇಲಿಮಠದ ಶ್ರೀಗಳಿಗೆ ಹೇಳಿದ ಖರ್ಗೆ, ನಾನು ಮಾಡಿದ ಕೆಲಸ ನೀರಿನಲ್ಲಿ ಹೋಯ್ತು ಎಂದು ಬೇಸರ ಹೊರಹಾಕಿದರು.
ತಾವು ಬ್ಲಾಕ್ ಅಧ್ಯಕ್ಷನಿಂದ ಈಗ AICC ಅಧ್ಯಕ್ಷನಾಗಿದ್ದೇನೆ. ನಾನು ಅಧಿಕಾರದ ಬೆನ್ನು ಹತ್ತಿ ಹೋಗಲಿಲ್ಲ, ಅದಾಗೇ ಸಿಕ್ಕಿದೆ ಎಂದು ನುಡಿದರು.