ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಗೆ ಮೋದಿ ಸ್ವಾಗತಿಸಿದ ಚೀನಾ! ಬೀಜಿಂಗ್: ಟಿಯಾಂಜಿನ್ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಗೆ ಚೀನಾ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ (Chinese Foreign Ministry) ತಿಳಿಸಿರುವುದಾಗಿ ವರದಿಯಾಗಿದೆ.
ಇದೇ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರ ವರೆಗೆ ಟಿಯಾಂಜಿನ್ನಲ್ಲಿ ಶೃಂಗ ಸಭೆ ನಡೆಯಲಿದೆ. 2020ರಲ್ಲಿ ಭಾರತ-ಚೀನಾ ಸೈನಿಕರ ನಡುವಿನ ಗಲ್ವಾನ್ ಘರ್ಷಣೆ ಬಳಿಕ ಚೀನಾಕ್ಕೆ ಮೋದಿ ಅವರ ಮೊದಲ ಭೇಟಿ ಇದಾಗಲಿದೆ.
ಟ್ರಂಪ್ ಸುಂಕ ಸಮರದ ನಡುವೆ ಬ್ರಿಕ್ಸ್ ಒಕ್ಕೂಟ ಭಾಗವಾಗಿರು ಚೀನಾ ಮೋದಿ ಅವರಿಗೆ ಆಹ್ವಾನ ನೀಡಿರುವುದು ಮಹತ್ವ ಪಡೆದುಕೊಂಡಿದೆ.
ಈ ಸಭೆಯು ಉಭಯ ರಾಷ್ಟ್ರಗಳ ಅಭಿವೃದ್ಧಿಯ ಮಾತುಕತೆಗಳ ಮೇಲೆ ಕೇಂದ್ರೀಕೃತವಾಗಿದೆ. ಜೊತೆಗೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಒಪ್ಪಂಗಳು ಆಗುವ ಸಾಧ್ಯತೆಯಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಹೇಳಿದ್ದಾರೆ.
ಕಳೆದ ಜೂನ್ನಲ್ಲಿ ನಡೆದ ಶೃಂಗ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಭಾರತವನ್ನು ಪ್ರತಿನಿಧಿಸಿದ್ದರು.
ಮೋದಿಗೆ ಪುಟಿನ್ ಫೋನ್ ಕಾಲ್:
ಇನ್ನೂ ಭಾರತ ಭೇಟಿಗೆ ಆಹ್ವಾನ ನೀಡಿದ ಬೆನ್ನಲ್ಲೇ ಮೋದಿ ಜೊತೆ ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.