ಅನನ್ಯಾ ಭಟ್ ಕೇಸ್ ಎಸ್ಐಟಿಗೆ ಹಸ್ತಾಂತರ! ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣದ (Ananya Bhat Case) ತನಿಖೆಯನ್ನು ಅಧಿಕೃತವಾಗಿ ಎಸ್ಐಟಿಗೆ (SIT) ಹಸ್ತಾಂತರಿಸಲಾಗಿದೆ.
ಡಿಜಿ & ಐಜಿಪಿ ಆದೇಶದಂತೆ ಮುಂದಿನ ವಿಚಾರಣೆಗಾಗಿ ಅನನ್ಯಾ ಭಟ್ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಲಾಗಿದೆ.
2003ರಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ತಾಯಿ ಸುಜಾತ ಭಟ್ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸದ್ಯ ದೂರು ಅರ್ಜಿಯ ತನಿಖೆಯನ್ನು ಎಸ್ಐಟಿಗೆ ಹಸ್ತಾಂತರಿಸಿ ಆದೇಶಿಸಲಾಗಿದೆ.