ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್! ದಸರಾ (Mysuru Dasara) ಉದ್ಘಾಟನೆಗೆ ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದು ಸಾಹಿತಿ ಬಾನು ಮುಷ್ತಾಕ್ (Banu Mushtaq) ಹೇಳಿದ್ದಾರೆ.
ಹಾಸನದಲ್ಲಿ (Hassan) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ್ದಕ್ಕೆ ಪರ ವಿರೋಧದ ಚರ್ಚೆಗಳ ಬಗ್ಗೆ ಅವರು ಪ್ರತಿಕ್ರಿಯಿಸಿದರು.
ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ. ನಾನು ರಾಜ್ಯದ ಜನತೆ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದನ ಹೇಳುತ್ತೆನೆ ಎಂದಿದ್ದಾರೆ.
ಸಂಸದ ಯದುವೀರ ಅವರು ಸ್ವಾಗತ ಮಾಡಿದ್ದಾರೆ. ಅವರಂತಹ ಸಂಸದರು ಹೆಚ್ಚಾಗಲಿಯೆಂದು ಆಶಿಸುತ್ತೇನೆ. ಬಿಜೆಪಿಯವರು ಮಾಡುವ ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ.
ಅವರ ಟೀಕೆಗಳ ಬಗ್ಗೆ ನಾನು ಬೇಜಾರು ಮಾಡಿಕೊಳ್ಳುವುದಿಲ್ಲ. ಯಾವುದಕ್ಕೆ ಟೀಕೆ ಮಾಡಬೇಕು, ಮಾಡಬಾರದೆಂಬ ತಿಳುವಳಿಕೆ ಕಾಂಗ್ರೆಸ್-ಬಿಜೆಪಿ ಪಕ್ಷದವರಿಗೆ ಇರಬೇಕು ಎಂದಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿದ್ದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಬಸನಗೌಡ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದರು.
ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು.
ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್ಗೆ (Heart Lamp) ಪ್ರಶಸ್ತಿ ಸಿಕ್ಕಿತ್ತು.
ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿತ್ತು.
ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.