
ಖ್ಯಾತ ನಿರ್ದೇಶಕ ರಾಜಮೌಳಿ ಅವರು ‘ವಾರಣಾಸಿ’ ಸಿನಿಮಾ (Varanasi Movie) ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಮಹೇಶ್ ಬಾಬು ಹೀರೋ.
ಈ ಸಿನಿಮಾ 2027ರಲ್ಲಿ ರಿಲೀಸ್ ಆಗೋ ಸಾಧ್ಯತೆ ಇದೆ. ಈ ಸಿನಿಮಾದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದಾರೆ.
ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ಖ್ಯಾತ ನಟ ಪ್ರಕಾಶ್ ರೈ ಕೂಡ ನಟಿಸಲಿದ್ದಾರೆ ಎಂದು ವರದಿ ಆಗಿದೆ.