75ನೇ ವರ್ಷಕ್ಕೆ ಮೋದಿ ನಿವೃತ್ತಿ ವದಂತಿ;ಮೋಹನ್ ಭಾಗವತ್ ಸ್ಪಷ್ಟನೆ! ಮುಂಬರುವ ಸೆಪ್ಟೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 75ನೇ ವಸಂತಕ್ಕೆ ಕಾಲಿಡಲಿದ್ದಾರೆ.
ಅಲ್ಲದೇ 75ನೇ ವಯಸ್ಸಿನಲ್ಲೇ ನಿವೃತ್ತಿ ಆಗಲಿದ್ದಾರೆ ಅನ್ನೋ ಚರ್ಚೆ ಹುಟ್ಟುಹಾಕಿತ್ತು. ಇದೀಗ ಎಲ್ಲ ಊಹಾಪೋಹಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ.
ಸ್ವತಃ ಭಾಗವತ್ ಅವರು ಸೆಪ್ಟೆಂಬರ್ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ 75ನೇ ವಯಸ್ಸಿಗೆ ಕಾಲಿಡುತ್ತಿರುವುದು ಇಲ್ಲಿ ಗಮನಾರ್ಹ.
ಆರ್ಎಸ್ಎಸ್ 100ನೇ ವರ್ಷದ ಹಿನ್ನೆಲೆ ನಡೆಸ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಗವತ್ ಅವರು, 75 ವರ್ಷವಾದಾಗ ನಾನು ನಿವೃತ್ತಿಯಾಗುತ್ತೇನೆ ಅಥವಾ ಬೇರೆಯವರು ನಿವೃತ್ತಿಯಾಗಬೇಕು ಎಂದು ನಾನು ಎಂದಿಗೂ ಹೇಳಿಲ್ಲ, ಎಂದು ಸ್ಪಷ್ಟಪಡಿಸಿದರು.
ಸಂಘ ನಮಗೆ ಏನು ಹೇಳುತ್ತದೆಯೋ ಅದನ್ನು ನಾವು ಮಾಡುತ್ತೇವೆ. ನಾವೆಲ್ಲರೂ ಸಂಘದ ಸ್ವಯಂಸೇವಕರು. ನಮಗೆ ಇಷ್ಟವಿರಲಿ, ಇಲ್ಲದಿರಲಿ, ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇವೆ.
ನಾನು 80 ವರ್ಷವಾದರೂ ಸಂಘವನ್ನು ಮುನ್ನಡೆಸುತ್ತೇನೆ ಎಂದು ಸಹ ತಿಳಿಸಿದರು.