ಸೆಪ್ಟೆಂಬರ್ 9 ರಿಂದ ಆರಂಭವಾಗುವ ಏಷ್ಯಾಕಪ್ ಟೂರ್ನಿಗೆ ಟೀಮ್ ಇಂಡಿಯಾ ಆಟಗಾರರ ಹೆಸರು ಪ್ರಕಟವಾಗಿದೆ.
ಸೂರ್ಯಕುಮಾರ್ ಯಾದವ್’ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ, ಭಾರತದ ಟೆಸ್ಟ್ ತಂಡದ ನಾಯಕ ಶುಭ್ಮನ್ ಗಿಲ್ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ,
ಜಸ್ಪ್ರೀತ್ ಬುಮ್ರಾ ಅವರನ್ನು ಎಸಿಸಿ ಪುರುಷರ ಏಷ್ಯಾ ಕಪ್ ಟಿ20 ಗಾಗಿ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
2023ರಲ್ಲಿ ನಡೆದ ಏಷ್ಯಾಕಪ್ ಟೂರ್ನಿಯು ಏಕದಿನ ಮಾದರಿಯಲ್ಲಿ ನಡೆದಿತ್ತು. ಆಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಇದೀಗ ಹಾಲಿ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸೂರ್ಯಕುಮಾರ್ ನೇತೃತ್ವದ ಟೀಂ ಇಂಡಿಯಾ ರೆಡಿಯಾಗಿದೆ.
2025ರ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದ್ದು, ಪ್ರಶಸ್ತಿಗಾಗಿ ಏಷ್ಯಾದ 8 ಬಲಿಷ್ಠ ತಂಡಗಳು ಕಾದಾಡಲಿವೆ. 8 ತಂಡಗಳನ್ನು ತಲಾ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
‘ಎ’ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಓಮನ್ ಹಾಗೂ ಯುಎಇ ತಂಡಗಳು ಸ್ಥಾನ ಪಡೆದಿವೆ. ಇನ್ನು ‘ಬಿ’ ಗುಂಪಿನಲ್ಲಿ ಆಫ್ಘಾನಿಸ್ತಾನ, ಬಾಂಗ್ಲಾದೇಶ, ಹಾಂಕಾಂಗ್ ಹಾಗೂ ಶ್ರೀಲಂಕಾ ತಂಡಗಳು ಸ್ಥಾನ ಪಡೆದಿವೆ.
ಬ್ಯಾಟರ್ಗಳು: ಸೂರ್ಯಕುಮಾರ್ ಯಾದವ್, ಶುಭ್ಮನ್ ಗಿಲ್, ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್ ಹಾಗೂ ತಿಲಕ್ ವರ್ಮಾ
ವಿಕೆಟ್ ಕೀಪರ್: ಸಂಜು ಸ್ಯಾಮ್ಸನ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್. ಎರಡನೇ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಜಿತೇಶ್ ಶರ್ಮಾ.
ಆಲ್ರೌಂಡರ್: ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ರಿಂಕು ಸಿಂಗ್.
ಬೌಲಿಂಗ್ ವಿಭಾಗ: ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ.
ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ:
ಸೂರ್ಯಕುಮಾರ್ ಯಾದವ್(ನಾಯಕ), ಶುಭ್ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಕುಮಾರ್(ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್.