Asia Cup 2025 | ಸೂಪರ್ ಸಂಡೇ ಭಾರತ-ಪಾಕ್ ಮುಖಾಮುಖಿ! ದುಬೈ: 2025ರ ಟಿ20 ಏಷ್ಯಾಕಪ್ (T20 Asia Cup) ಟೂರ್ನಿಯಲ್ಲಿ ಹ್ಯಾಂಡ್ ಶೇಕ್ ವಿವಾದ ತಣ್ಣಗಾಗುವ ಮುನ್ನವೇ ಭಾರತ – ಪಾಕಿಸ್ತಾನ (Ind vs Pak) ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ.
ಟೂರ್ನಿಯ ಲೀಗ್ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ (Team India) ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡಗಳು ಭಾನುವಾರ (ಸೆ.21) ಮತ್ತೊಮ್ಮೆ ಮುಖಾಮುಖಿಯಾಗಲಿವೆ.
ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ನಡೆಯಲಿದೆ.
ಈಗಾಗಲೇ ಲೀಗ್ ಸುತ್ತಿನಲ್ಲಿ ತನ್ನ ಮೂರು ಪಂದ್ಯಗಳನ್ನಾಡಿರುವ ಪಾಕ್ 2 ರಲ್ಲಿ ಗೆದ್ದು 4 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದರೆ, ಭಾರತ ಎರಡೂ ಪಂದ್ಯಗಳಲ್ಲಿ ಗೆದ್ದು ಅಗ್ರಸ್ಥಾನದಲ್ಲಿದೆ.
ಸೆ.19ರಂದು ಒಮನ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನಾಡಲಿದ್ದು, ಭಾನುವಾರ ಸೂಪರ್ ಫೋರ್ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಮುಖಾಮುಖಿಯಾಗಲಿದೆ.
ಕಳೆದ ಭಾನುವಾರ ಪಾಕ್ ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿತ್ತು. ಆದ್ರೆ ಈ ಪಂದ್ಯದ ಟಾಸ್ ವೇಳೆ ಹಾಗೂ ಪಂದ್ಯದ ಗೆದ್ದ ಬಳಿಕ ಭಾರತೀಯ ಆಟಗಾರರು ಹ್ಯಾಂಡ್ ಶೇಕ್ ಮಾಡೋದನ್ನ ಬಿಟ್ಟಿದ್ದರು.
ಸದ್ಯ ಹ್ಯಾಂಡ್ ಶೇಕ್ ವಿವಾದ ತೀವ್ರತೆ ಕಡಿಮೆಯಾಗುವ ಮುನ್ನವೇ ಭಾರತ-ಪಾಕ್ ಸೂಪರ್ ಫೋರ್ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುತ್ತಿರುವುದು ಭಾರೀ ಥ್ರಿಲ್ಲಿಂಗ್ ಆಗಿಸಿದೆ.