
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ಗೆ ಇಂದು ಜನುಮದಿನದ ಸಂಭ್ರಮ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

63ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಶಿವಣ್ಣನ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದರು, ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನ ನಿವಾಸದಲ್ಲಿ ಪತ್ನಿ ಗೀತಾ ಜೊತೆ, ಕೇಕ್ ಕಟ್ ಮಾಡುವ ಮೂಲಕ ಶಿವಣ್ಣ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ.
ಇನ್ನು, ನಟ ಶಿವಣ್ಣನನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಮನೆ ಬಳಿ ಬ್ಯಾನರ್ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮುಖ್ಯವಾಗಿ ಶಿವಣ್ಣ ಮನೆ ಬಳಿ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. ಈ ಮಧ್ಯೆ ಮನೆ ಬಳಿ ಆಗಮಿಸಿದ್ದ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ಮಾಡಿ ಕಳುಹಿಸಿಕೊಟ್ಟಿದ್ದಾರೆ.