ರಾಜ್ಯದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಪೂರೈಕೆಯಾಗಿದೆ.. ಜೋಶಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೀ ಸುಳ್ಳು ಹೇಳುವುದೇ ಒಂದು ಕಾಯಕವಾಗಿ ಬಿಟ್ಟಿದೆ. ಯಾವತ್ತೂ ಮಾತಿಗೆ ಮೊದಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನೇ ಚಟವಾಗಿಸಿಕೊಂಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ರಸಗೊಬ್ಬರ ಪೂರೈಕೆ, ದಾಸ್ತಾನು ವಿಷಯದಲ್ಲಿ ಕೃಷಿ ಸಚಿವರೇ ಸತ್ಯ ಒಪ್ಪಿಕೊಂಡಿದ್ದಾರೆ. ಅಲ್ಲದೇ, ಹೇಳಿಕೆ ನೀಡಿ ಸ್ಪಷ್ಟಪಡಿಸಿದ್ದಾರೆ. ಆದರೆ, ಸಿಎಂ ಮಾತ್ರ ಅವಾಸ್ತವಿಕ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಕುರ್ಚಿ ಗಲಾಟೆ, ಹದಗೆಟ್ಟ ರಾಜ್ಯದ ಆರ್ಥಿಕ ಸ್ಥಿತಿ ಮತ್ತು ತಮ್ಮ ಸರ್ಕಾರದ ದುರಾಡಳಿತವನ್ನೆಲ್ಲ ಮರೆಮಾಚಲು ಹೀಗೆ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ಅಕ್ಷಮ್ಯ ವಾಗ್ದಾಳಿ ನಡೆಸಿದ್ದಾರೆ.

twitter

Leave a Reply

Your email address will not be published. Required fields are marked *