
ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿರುವ ಟೀಂ ಇಂಡಿಯಾ ಕೊನೆಗೂ ಗೆಲುವು ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ಲೀಡ್ಸ್ ಟೆಸ್ಟ್ನಲ್ಲಿ ಗೆಲುವಿನ ಸನಿಹದಲ್ಲಿ ಎಡವಿದ್ದ ಟೀಂ ಇಂಡಿಯಾ ಇದೀಗ ಎಡ್ಜ್ಬಾಸ್ಟನ್ ಟೆಸ್ಟ್ನಲ್ಲಿ ಭಾರಿ ಗೆಲುವು ದಾಖಲಿಸಿದೆ.
ಈ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ರಲ್ಲಿ ಸಮಬಲ ಸಾಧಿಸಿದೆ. ಎರಡನೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ನೀಡಿದ 608 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 271 ರನ್ಗಳಿಗೆ ಆಲೌಟ್ ಆಗುವ ಮೂಲಕ 337 ರನ್ಗಳಿಂದ ಪಂದ್ಯವನ್ನು ಕಳೆದುಕೊಂಡಿತು. ಭಾರತದ ಈ ಗೆಲುವಿನಲ್ಲಿ ನಾಯಕ ಶುಭ್ಮನ್ ಗಿಲ್ ಬ್ಯಾಟಿಂಗ್ನಲ್ಲಿ ಅಮೋಘ ಪ್ರದರ್ಶನ ನೀಡಿದರೆ, ಇತ್ತ ಬೌಲಿಂಗ್ನಲ್ಲಿ ಆಕಾಶ್ ದೀಪ್ ಹಾಗೂ ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ಮಾರಕ ದಾಳಿ ನಡೆಸಿ ಆಂಗ್ಲರನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.