ಲಂಡನ್: ಪ್ರಧಾನಿ ಮೋದಿ ಈಗಾಗಲೇ ದ್ವಿಪಕ್ಷೀಯ ಒಪ್ಪಂದಕ್ಕೆ ಯುಕೆಗೆ ಭೇಟಿ ನೀಡಿದ್ದಾರೆ. ಭಾರತ ಹಾಗೂ ಬ್ರಿಟನ್ ನಡುವೆ ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಭಾರತದೊಂದಿಗೆ ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು,
ಸಾವಿರಾರು ಬ್ರಿಟಿಷ್ ಉದ್ಯೋಗಗಳು ಮತ್ತು 6 ಬಿಲಿಯನ್ ಡಾಲರ್ ಹೂಡಿಕೆ ಮತ್ತು ರಫ್ತು ಒಪ್ಪಂದ ನಡೆದಿದೆ. ಮೂರು ವರ್ಷಗಳ ಸುದೀರ್ಘ ಮಾತುಕತೆಯಿಂದಾಗಿ, ಕೊನೆಗೂ ಪ್ರಧಾನಿ ನರೇಂದ್ರ ಮೋದಿಯವರ ಯುಕೆ ಭೇಟಿಯ ಸಂದರ್ಭದಲ್ಲಿ ಬ್ರಿಟನ್ ಮತ್ತು ಭಾರತ ಇಂದು ಔಪಚಾರಿಕವಾಗಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.
ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ ರಾಷ್ಟ್ರಗಳ ನಡುವಿನ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುನೈಟೆಡ್ ಕಿಂಗ್ಡಮ್ Kingdom) ಪ್ರಧಾನಿ ಕೇರ್ ಸ್ಟಾರ್ಮರ್ ಸಹಿ ಹಾಕಿದ್ದಾರೆ.
ಎರಡೂ ರಾಷ್ಟ್ರಗಳ ವ್ಯಾಪಾರ ಒಪ್ಪಂದದ ಬಳಿಕ ಮಾತನಾಡಿದ ಮೋದಿ, ಒಪ್ಪಂದದ ಬಗ್ಗೆ ಹಲವಾರು ವಿಷಯಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಈ ವೇಳೆ ‘ಇಂದು ಭಾರತ ಮತ್ತು ಯುಕೆ ನಡುವಿನ ಸಂಬಂಧಗಳಿಗೆ ಐತಿಹಾಸಿಕ ದಿನ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದು ಐತಿಹಾಸಿಕ ದಿನ
‘ಇಂದು ಭಾರತ ಮತ್ತು ಯುಕೆ ನಡುವಿನ ಸಂಬಂಧಗಳಿಗೆ ಐತಿಹಾಸಿಕ ದಿನ’ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಪ್ರಧಾನಿ ಮೋದಿ ಹೇಳಿದ್ದಾರೆ.
ಹಲವು ವರ್ಷಗಳ ಕಠಿಣ ಪರಿಶ್ರಮದ ನಂತರ, ಎರಡು ರಾಷ್ಟ್ರಗಳ ನಡುವೆ ಆರ್ಥಿಕ ಸಹಕಾರವು ಸಾಕಾರಗೊಂಡಿದೆ ಎಂದು ಪ್ರಧಾನಿ ಮೋದಿ ಈ ವೇಳೆ ಹೇಳಿದರು.
‘ಭಾರತದ ಕೃಷಿ ಉತ್ಪನ್ನಗಳಿಗೆ ಯುಕೆ ಆಹಾರ ಸಂಸ್ಕರಣಾ ಉದ್ಯಮದಲ್ಲಿ ಹೊಸ ಅವಕಾಶ ಸಿಗಲಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅಂದರೆ ಈ ಒಪ್ಪಂದವು ಭಾರತದ ಯುವಕರಿಗೆ, ರೈತರು, MSEME ವಲಯಗಳಿಗೆ ಪ್ರಯೋಜನಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಅಲ್ಲದೇ ವ್ಯಾಪಾರದ ವೇಗ ಇನ್ನಷ್ಟು ವೇಗ ಪಡೆಯಲಿದೆ, ವ್ಯವಹಾರ ಮಾಡುವ ವೆಚ್ಚ ಕಡಿಮೆಯಾಗಲಿದೆ ಮತ್ತು ವಿಶ್ವಾಸ ಬೆಳೆಯಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಭಾರತದಲ್ಲಿ 6 ಯುಕೆ ವಿಶ್ವವಿದ್ಯಾಲಯಗಳು!
ಇನ್ನು ಈ ವೇಳೆ ಮಾತನಾಡಿದ ಮೋದಿ, ಭಾರತದಲ್ಲಿ 6 ಯುಕೆ ವಿಶ್ವವಿದ್ಯಾಲಯಗಳ ಕ್ಯಾಂಪಸ್ಗಳನ್ನು ತೆರೆಯಲಿವೆ ಎಂದು ಹೇಳಿದ್ದಾರೆ.
ಶಿಕ್ಷಣದಲ್ಲಿ, ಎರಡೂ ರಾಷ್ಟ್ರಗಳು ಒಟ್ಟಾಗಿ ಹೊಸ ಅಧ್ಯಾಯವನ್ನು ಬರೆಯಲು ಮುಂದಾಗಿದೆ. ಭಾರತದಲ್ಲಿ ಆರು ವಿಶ್ವವಿದ್ಯಾಲಯಗಳು ಕ್ಯಾಂಪಸ್ಗಳನ್ನು ತೆರೆಯಲಿವೆ ಎಂದು ಹೇಳಿದರು.
ದ್ವಂದ್ವ ನೀತಿಗೆ ಅವಕಾಶವಿಲ್ಲ!
ಪಹಲ್ಗಾಮ್ ಭಯೋತ್ಪಾದಕ ದಾಳಿ ವೇಳೆ ಯುಕೆ ಪ್ರಧಾನಿ ಸ್ಟಾರ್ಮರ್ ಅವರ ಬೆಂಬಲವನ್ನು ಶ್ಲಾಘಿಸಿದ್ದು, “ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ದ್ವಂದ್ವ ನೀತಿಗೆ ಅವಕಾಶವಿಲ್ಲ.
“ಪ್ರಜಾಪ್ರಭುತ್ವದ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುವವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂದು ಪ್ರಧಾನಿ ಮೋದಿ ಹೇಳಿದರು.