
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4, 2025 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ 11 ಜನರು ದಾರುಣವಾಗಿ ಮೃತಪಟ್ಟಿದ್ದರು.
ಇನ್ನು ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಆರ್ಸಿಬಿ, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಮಕ್ಕೆ ಸಚಿವ ಸಂಪುಟ ತೀರ್ಮಾನಿಸಿದೆ. ಇ
ದೀಗ ಕಾಲ್ತುಳಿತ ಪ್ರಕರಣ ಸಂಬಂಧಿಸಿ ಮತ್ತೊಂದು ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ.ಹೌದು, ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ಪೋಷಕರು, ತಮ್ಮ ಮಗಳ ಶವಪರೀಕ್ಷೆಯ ವೇಳೆ ಆಕೆಯ ಚಿನ್ನದ ಕಿವಿಯೋಲೆ ಕಾಣೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ಈ ಘಟನೆಯು ಶವಾಗಾರದ ಭದ್ರತೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಮೃತಪಟ್ಟ 14 ವರ್ಷದ ಬಾಲಕಿ ದಿವ್ಯಾಂಶಿಯ ತಾಯಿ ಅಶ್ವಿನಿ, ತಮ್ಮ ಮಗಳ ಚಿನ್ನದ ಕಿವಿಯೋಲೆಗಳು ಶವಪರೀಕ್ಷೆಯ ನಂತರ ಕಾಣೆಯಾಗಿವೆ ಎಂದು ಆರೋಪಿಸಿದ್ದಾರೆ.
ಈ ಕಿವಿಯೋಲೆಗಳು ದಿವ್ಯಾಂಶಿ ಬಹಳಷ ಇಷ್ಟದಿಂದ ಕಳೆದ ಒಂದೂವರೆ ವರ್ಷದಿಂದ ಕಿವಿಯಲ್ಲೇ ಧರಿಸಿಕೊಂಡಿದ್ದರಂತೆ.