SIIMA 2025| ಸೈಮಾ ವಿರುದ್ಧ ವೇದಿಕೆಯಲ್ಲೇ ದುನಿಯಾ ವಿಜಯ್ ಗರಂ! 2024ರ ಸಾಲಿನ ಸೈಮಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ ಮಾಡಲಾಗಿದೆ ಎಂದು ದುನಿಯಾ ವಿಜಯ್ ಆಕ್ರೋಶ ಹೊರಹಾಕಿದ್ದಾರೆ. ದುಬೈನಲ್ಲಿ ನಡೆದ ಸಮಾರಂಭದಲ್ಲಿ ಬೇಕು ಅಂತಲೇ ಕನ್ನಡಿಗರಿಗೆ ಕೊನೆಯಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿಜಿ ಸಿಟ್ಟು ಕೋಪಗೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಕಲಾವಿದರು, ತಂತ್ರಜ್ಞರು ಭಾಗಿಯಾಗಿ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಭೀಮಾ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಟ ದುನಿಯಾ ವಿಜಯ್ ವೇದಿಕೆಯಲ್ಲೇ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಎಲ್ಲಾ ಭಾಷೆಯ ಸಿನಿಮಾ ನಟ, ನಟಿಯರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಕೊನೆಗೆ ಕನ್ನಡ ಚಿತ್ರರಂಗದವರಿಗೆ ಪ್ರಶಸ್ತಿ ನೀಡಲಾಗುತ್ತದೆ.
ಪ್ರತಿಬಾರಿಯೂ ಈ ರೀತಿಯಾಗಿಯೇ ನಡೆದುಕೊಂಡು ಬಂದಿದೆ. ಕೊನೆಗೆ ಪ್ರಶಸ್ತಿ ನೀಡುವಾಗ ಎಲ್ಲರೂ ಎದ್ದು ಹೋಗಿರುತ್ತಾರೆ. ಎಲ್ಲರೂ ಇದ್ದಾಗಲೇ ಕನ್ನಡಿಗರಿಗೂ ಕರೆದು ಅವಾರ್ಡ್ ಕೊಡಿ ಎಂದು ವೇದಿಕೆಯ ಮೇಲೆಯೇ ನಟ ದುನಿಯಾ ವಿಜಯ್ ಗರಂ ಆಗಿದ್ದಾರೆ.