ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಇವರೇ..! ಅಚ್ಚರಿಯ ಭವಿಷ್ಯ..

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಇವರೇ..! ಅಚ್ಚರಿಯ ಭವಿಷ್ಯ..

ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಮುಖ್ಯಮಂತ್ರಿ ಬಗ್ಗೆ ಅಚ್ಚರಿಯ ಹೇಳಿಕೆಯೊಂದು ಸದ್ಯ ಸುದ್ದಿಯಾಗುತ್ತಿದೆ.

ಈಗಾಗಲೇ ಸಿಎಂ ರೇಸ್‌ನಲ್ಲಿ ಡಿಕೆ ಶಿವಕುಮಾರ್‌, ಜಿ.ಪರಮೇಶ್ವರ್‌, ಎಂಬಿ ಪಾಟೀಲ್‌, ಸತೀಶ್‌ ಜಾರಕಿಹೊಳಿ ಸೇರಿದಂತೆ ಹಲವು ನಾಯಕರಿದ್ದು, ಈ ಪೈಕಿ ಇವರಿಗೆ ಮುಖ್ಯಮಂತ್ರಿ ಪಟ್ಟ ಎಂದು ಕೋಡಿಶ್ರೀ ಹೇಳಿದ್ದಾರೆ.

ವಿಜಯಪುರ‌ ಜಿಲ್ಲೆಯ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂದರ್ಭದಲ್ಲಿ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದರು.

ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬೆನ್ನಲ್ಲೇ ಈ ಹೇಳಿಕೆ ವೈರಲ್‌ ಆಗಿದೆ.

ಕಳೆದ ತಿಂಗಳಷ್ಟೇ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರ ರಾಜ್ಯ ರಾಜಕಾರಣದ ಸಂಬಂಧ ಸ್ಫೋಟಕ ಭವಿಷ್ಯ ನುಡಿದಿದ್ದರು.

ರಾಜ್ಯ ಸರ್ಕಾರಕ್ಕೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದರು. ಮತ್ತೊಂದು ಭವಿಷ್ಯ ನುಡಿದಿದ್ದ ಕೋಡಿಶ್ರೀ ಅವರು ಹಾಲು ಕೆಟ್ಟರೂ, ಹಾಲಮತ ಸಮಾಜ ಕೆಡುವುದಿಲ್ಲ ಎಂಬ ಮಾತಿದೆ.

ಅದರಂತೆ ಈಗ ಹಾಲಮತ ಸಮಾಜದವರ ಕೈಯಲ್ಲೇ ರಾಜ್ಯದ ಚುಕ್ಕಾಣಿ ಇದೆ. ಹಾಗಾಗಿ ಅಧಿಕಾರವನ್ನು ಅವರಿಂದ ಬಿಡಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ, ಅವರಾಗಿಯೇ ಅಧಿಕಾರ ಬಿಡಬೇಕು ಎಂದು ಸಿದ್ದರಾಮಯ್ಯ ಅವರ ಕುರಿತು ಪರೋಕ್ಷವಾಗಿ ಹೇಳಿದ್ದರು.

“ಎಂಬಿ ಪಾಟೀಲ್‌ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ. ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಲಿ” ಎಂದು ಹೇಳಿದ್ದಾರೆ.

One thought on “ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಇವರೇ..! ಅಚ್ಚರಿಯ ಭವಿಷ್ಯ..

Leave a Reply

Your email address will not be published. Required fields are marked *