
ನವದೆಹಲಿ: ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ (Congress Rally) ಮೋದಿ, ನಿಮ್ಮ ಸಮಾಧಿಯನ್ನು ಇಂದು ಅಲ್ಲದಿದ್ದರೆ ನಾಳೆ ಅಗೆಯಲಾಗುತ್ತದೆ ಎಂಬ ಘೋಷಣೆಗಳು ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ (BJP) ನಾಯಕರು ಲೋಕಸಭೆ, ರಾಜ್ಯಸಭೆಯಲ್ಲಿ ಕೋಲಾಹಲ ಸೃಷ್ಟಿಸಿದರು.
ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು ಹಾಗೂ ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಈ ವಿಷಯವನ್ನು ಪ್ರಸ್ತಾಪಿಸಿ ಸೋನಿಯಾ ಗಾಂಧಿ (Sonia Gandhi) ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.