ಬೆಂಗಳೂರಿನ ಜನರ ಎದುರು ನೋಡುತ್ತಿದ್ದೇನೆ,ಕನ್ನಡದಲ್ಲೇ ಮೋದಿ ಟ್ವೀಟ್! ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮೆಟ್ರೋ ಮೂರನೇ ಹಂತದ ಯೋಜನೆಗೆ ಶಂಕುಸ್ಥಾಪನೆ, ಹಳದಿ ಮೆಟ್ರೋ ಮಾರ್ಗ ಉದ್ಘಾಟನೆ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ತಮ್ಮ ನಾಳಿನ ಕಾರ್ಯಕ್ರಮದ ಬಗ್ಗೆ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ.ಎಸ್.ಆರ್. ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು.
ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು.
ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಗುವುದು ಎಂದು ಮೋದಿ ತಿಳಿಸಿದ್ದಾರೆ.
