ಬೆಂಗಳೂರು ಕಮಿಷನರ್ಗೆ ದೂರು ಕೊಟ್ಟ ನಟಿ ರಮ್ಯಾ! ಈಗಾಗಲೇ ನಟಿ ರಮ್ಯಾ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.
ಇದೀಗ ಸ್ವತಃ ನಟಿ ಅವರೇ ಕಮೀಷನರ್ ಆಫೀಸ್ಗೆ ತೆರಳಿ, ತನ್ನ ವಿರುದ್ಧ ದರ್ಶನ್ ಅಭಿಮಾನಿಗಳ ವರ್ತನೆಯ ಬಗ್ಗೆ ದೂರು ನೀಡಿದ್ದಾರೆ.
ನಟಿ ರಮ್ಯಾ ಮತ್ತು ದರ್ಶನ್ ಫ್ಯಾನ್ಸ್ ನಡುವಿನ ಸೋಷಿಯಲ್ ಮೀಡಿಯಾ ಕಮೆಂಟ್ಸ್ ಕಾಳಗ ಶುರುವಾಗಿದೆ.
ರೇಣುಕಾಸ್ವಾಮಿ ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಜುಲೈ 24 ರಂದು ನಡೆಯಿತು.
ಆ ದಿನ ನಟಿ ರಮ್ಯಾ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಆಶಿಸಿದ್ದರು.
ಇದು ದರ್ಶನ್ ಫ್ಯಾನ್ಸ್ಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಲದೇ ಅಶ್ಲೀಲ ಕಮೆಂಟ್ಗಳನ್ನು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಇದೀಗ ನಟಿ ರಮ್ಯಾ ದರ್ಶನ್ ಫ್ಯಾನ್ಸ್ಗಳ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಈಗಾಗಲೇ ನಟಿ ರಮ್ಯಾ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.
ಇದೀಗ ಸ್ವತಃ ನಟಿ ಅವರೇ ಕಮೀಷನರ್ ಆಫೀಸ್ಗೆ ತೆರಳಿ, ತನ್ನ ವಿರುದ್ಧ ದರ್ಶನ್ ಅಭಿಮಾನಿಗಳ ವರ್ತನೆಯ ಬಗ್ಗೆ ದೂರು ನೀಡಿದ್ದಾರೆ.
ಕಾನೂನು ಸಮರಕ್ಕೆ ಮುಂದಾದ ರಮ್ಯಾ!
ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡುವುದಾಗಿ ಮೊದಲೇ ರಮ್ಯಾ ಅವರು ಸೂಚನೆ ನೀಡಿದ್ದರು. ಇದೀಗ ಕೊನೆಗೂ ನಟಿ ರಮ್ಯಾ ತನ್ನ ಬಗ್ಗೆ ಅಶ್ಲೀಲ ನಿಂದನೆ ಬಗ್ಗೆ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ದೂರು ದಾಖಲಿಸಿದ್ದಾರೆ.
ಇನ್ನು ದೂರು ಕೊಟ್ಟ ಮಾಧ್ಯಮದೊಂದಿಗೆ ಮಾತನಾಡಿದ ರಮ್ಯಾ ‘ಎಲ್ಲಾ ಹೆಣ್ಣುಮಕ್ಕಳ ಪರವಾಗಿ ದೂರು ಕೊಟ್ಟಿದ್ದೀನಿ‘ ಎಂದು ಹೇಳಿದ್ದಾರೆ. ಇನ್ಮುಂದೆ ಈ ರೀತಿ ಆಗಬಾರದು ಎಂದು ಕ್ರಮ ಕೈಗೊಳ್ಳಲು ದೂರು ನೀಡಿದ್ದೀನಿ ಎಂದು ಹೇಳಿದ್ದಾರೆ.
